ಕೀರ್ತನೆಗಳು 59:11

ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 59

9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.

10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.

11ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.

12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.

13ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.

ಕೀರ್ತನೆಗಳು 59 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी