ಜೆಕರ್ಯ 14:16

ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.

ಸಂದರ್ಭದೊಂದಿಗೆ ಓದಿ · ಜೆಕರ್ಯ 14

14ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.

15ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.

16ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.

17ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.

18ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.

ಜೆಕರ್ಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी