ಯೆಹೆಜ್ಕೇಲನು 39:12

ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 39

10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

11ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್‌ ಎಂದು ಕರೆಯುವರು.

12ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.

13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.

14ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.

ಯೆಹೆಜ್ಕೇಲನು 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी