೧ ಕೊರಿಂಥದವರಿಗೆ 15:52

ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 15

50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.

51ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.

52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.

53ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.

54ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.

೧ ಕೊರಿಂಥದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी