ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
2ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
3ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
4ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ