ಯೆಹೆಜ್ಕೇಲನು 20:10

ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.

9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;

10ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.

11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.

12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी