ಯೆಹೆಜ್ಕೇಲನು 16:36

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

34ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.

35ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.

36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ

37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.

38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी