ದಾನಿಯೇಲನು 2:37

ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 2

35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.

36ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.

37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.

38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.

39ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.

ದಾನಿಯೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी