ಯೆರೆಮಿಯ 15:3

ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 15

1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.

2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.

3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.

4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.

5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?

ಯೆರೆಮಿಯ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी