ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ