ಯೆಹೋಶುವ 24:10

ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 24

8ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.

9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.

10ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.

11ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.

12ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.

ಯೆಹೋಶುವ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी