ಆದಿಕಾಂಡ 37:16

ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 37

14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.

15ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.

16ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.

17ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.

18ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.

ಆದಿಕಾಂಡ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी