೧ ಪೂರ್ವಕಾಲವೃತ್ತಾಂತ 9:11

ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 9

9ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.

10ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;

11ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;

12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

13ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.

೧ ಪೂರ್ವಕಾಲವೃತ್ತಾಂತ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी