೨ ಅರಸುಗಳು 18:24

ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?

ಸಂದರ್ಭದೊಂದಿಗೆ ಓದಿ · ೨ ಅರಸುಗಳು 18

22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?

23ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.

24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?

25ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.

26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.

೨ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी