ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
16ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
18ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ