ಎಜ್ರನು 7:16

ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ

ಸಂದರ್ಭದೊಂದಿಗೆ ಓದಿ · ಎಜ್ರನು 7

14ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ

15ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ

16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ

17ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.

18ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.

ಎಜ್ರನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी