ಯೋಹಾನನು 4:13

ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;

ಸಂದರ್ಭದೊಂದಿಗೆ ಓದಿ · ಯೋಹಾನನು 4

11ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?

12ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.

13ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;

14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.

15ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.

ಯೋಹಾನನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी