ಯೆರೆಮಿಯ 49:23

ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 49

21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.

22ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.

23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.

24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.

25ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?

ಯೆರೆಮಿಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी