ಯೆಹೆಜ್ಕೇಲನು 38:15

ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 38

13ಶೇಬಾ, ದೇದಾನ್‌ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.

14ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ

15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.

16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.

17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?

ಯೆಹೆಜ್ಕೇಲನು 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी