ಅಪೊಸ್ತಲರ ಕೃತ್ಯಗಳು 24:25

ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 24

23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.

24ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.

25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

26ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.

27ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.

ಅಪೊಸ್ತಲರ ಕೃತ್ಯಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी