ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.
2ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
4ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.
5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ