ಯೆರೆಮಿಯ 50:12

ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

10ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.

11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ

12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.

13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.

14ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी