ಯೆಹೆಜ್ಕೇಲನು 23:39

ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 23

37ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.

38ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.

39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;

40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.

41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.

ಯೆಹೆಜ್ಕೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी