ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
12ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
13ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ