ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
14ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ