ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
13ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
15ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ