ಆದಿಕಾಂಡ 19:2

ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 19

1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್‌ಗೆ ಬಂದಾಗ ಲೋಟನು ಸೊದೋ ಮ್‌ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ

2ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.

3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.

4ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.

ಆದಿಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी