೧ ಸಮುವೇಲನು 7:7

ಆದರೆ ಇಸ್ರಾಯೇಲ್‌ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 7

5ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--

6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್‌ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.

7ಆದರೆ ಇಸ್ರಾಯೇಲ್‌ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.

8ಆಗ ಇಸ್ರಾಯೇಲ್‌ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.

9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.

೧ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी