ಯೆಹೋಶುವ 22:25

ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;

ಸಂದರ್ಭದೊಂದಿಗೆ ಓದಿ · ಯೆಹೋಶುವ 22

23ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.

24ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?

25ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;

26ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ

27ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.

ಯೆಹೋಶುವ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी