ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
1ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ