ಯೆರೆಮಿಯ 9:3

ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 9

1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.

2ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.

3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.

4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.

5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6

ಯೆರೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी