ಯೆಶಾಯ 29:13

ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 29

11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;

12ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.

13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.

15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!

ಯೆಶಾಯ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी