ಯೋಹಾನನು 15:17

ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 15

15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.

16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.

ಯೋಹಾನನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी