೨ ಸಮುವೇಲನು 15:19

ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 15

17ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.

18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.

19ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.

20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.

21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.

೨ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी