ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
16ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
17ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
18ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ