ಲೂಕನು 9:58

ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 9

56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.

57ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.

58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.

59ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.

60ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी