ಅಪೊಸ್ತಲರ ಕೃತ್ಯಗಳು 19:36

ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 19

34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.

35ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?

36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.

37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.

38ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.

ಅಪೊಸ್ತಲರ ಕೃತ್ಯಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी