ಯೆರೆಮಿಯ 33:11

ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 33

9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.

10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ

11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.

12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.

13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.

ಯೆರೆಮಿಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी