೧ ಸಮುವೇಲನು 12:12

ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 12

10ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.

11ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.

12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.

13ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.

14ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.

೧ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी