ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
12ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
14ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
15ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ