ಯೆಹೆಜ್ಕೇಲನು 32:3

ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

1ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

2ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.

3ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.

4ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.

5ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी