ಆದಿಕಾಂಡ 31:1

ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 31

1ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.

2ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.

3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.

ಆದಿಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी