ಯೋಹಾನನು 8:11

ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 8

9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.

10ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.

11ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.

12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

13ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी