ಮತ್ತಾಯನು 26:38

ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.

37ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.

38ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.

39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.

40ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी