ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
20ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
21ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
22ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
23ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ