ವಿಮೋಚನಕಾಂಡ 18:3

ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್‌ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 18

1ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ

2ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.

3ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್‌ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.

4ಇನ್ನೊಬ್ಬನ ಹೆಸರು ಎಲೀಯೆಜರ್‌ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.

5ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.

ವಿಮೋಚನಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी