ಯೆರೆಮಿಯ 47:5

ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 47

3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.

4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.

5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?

6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.

7ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.

ಯೆರೆಮಿಯ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी