ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
7ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
8ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
9ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ