೧ ಸಮುವೇಲನು 31:2

ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 31

1ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್‌ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.

2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.

3ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.

4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.

೧ ಸಮುವೇಲನು 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी