ನ್ಯಾಯಸ್ಥಾಪಕರು 19:19

ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 19

17ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.

18ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್‌ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.

19ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.

20ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ

21ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.

ನ್ಯಾಯಸ್ಥಾಪಕರು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी